@ifaaz_shaafi: ಮಂಗಳೂರಿನ ಪ್ರಮುಖ ಖಾಝಿ, ಗೌರವಾನ್ವಿತ ಧಾರ್ಮಿಕ ನಾಯಕ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನದ ಸುದ್ದಿ ಅತ್ಯಂತ ದುಃಖ ತಂದಿದೆ. ಅವರು ತಮ್ಮ ಜೀವನವನ್ನೆಲ್ಲಾ ಧರ್ಮ, ಶಿಕ್ಷಣ ಮತ್ತು ಸಮಾಜ ಸೇವೆಗೆ ಸಮರ್ಪಿಸಿ, ಸಾವಿರಾರು ಜನರಿಗೆ ಮಾರ್ಗದರ್ಶಕರಾಗಿದ್ದರು. ಅವರ ಸರಳತೆ, ಜ್ಞಾನ ಮತ್ತು ಸಮನ್ವಯದ ಚಿಂತನೆ ಸಮಾಜದಲ್ಲಿ ಅಚ್ಚಳಿಯದ ಗುರುತು ಮೂಡಿಸಿದೆ. ಅವರ ಅಗಲಿಕೆ ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲದೆ ಸಮಸ್ತ ಸಮಾಜಕ್ಕೆ ಅಪಾರ ನಷ್ಟವಾಗಿದೆ. ಅಲ್ಲಾಹ್ ಅವರು ಅವರಿಗೆ ಜನ್ನತುಲ್ ಫಿರ್ದೌಸ್‌ನಲ್ಲಿ ಉನ್ನತ ಸ್ಥಾನ ನೀಡಲಿ ಮತ್ತು ಅವರ ಕುಟುಂಬಸ್ಥರು, ಶಿಷ್ಯರು ಹಾಗೂ ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.